ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಯ ಸರ್ಜರಿ ವಾರ್ಡ್ ಬಂದ್ ಮಾಡಿ, ಸರ್ಜರಿ ವಾರ್ಡ್ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ.
ಏ.29 ರಂದು ಹೈದರಾಬಾದ್ನಿಂದ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮಕ್ಕೆ 37 ವರ್ಷದ ವ್ಯಕ್ತಿ ಆಗಮಿಸಿದ್ದರು. ತೀವ್ರ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ 2 ದಿನ ಸರ್ಜರಿ ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆ ವ್ಯಕ್ತಿಗ ಗಂಟಲು ದ್ರವ ಪಡೆದು ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಇಎಸ್ಐ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ನೀಡಿದ ಬಸವೇಶ್ವರ ಆಸ್ಪತ್ರೆಯ ವೈದ್ಯರು ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದ್ದು, ಕೆಲವರನ್ನು ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಸರ್ಜರಿ ವಾರ್ಡ್ ಬಂದ್ ಮಾಡಲಾಗಿದ್ದು, ಆಸ್ಪತ್ರೆ ತುರ್ತು ಸೇವೆಗಳನ್ನು ಕೂಡ ಇಂದು ಸ್ಥಗಿತಗೊಳಿಸಲಾಗಿದೆ.