ETV Bharat / state

ಅನುಮತಿ ಪಡೆಯದೆ ಸೈಕಲ್​ ಜಾಥಾ: ಕೈ ನಾಯಕರ ವಿರುದ್ಧ ಕೇಸು ದಾಖಲಿಸಲು ಆಗ್ರಹ - ಬಿಜೆಪಿ ಮುಖಂಡೆ ದಿವ್ಯ ಹಾಗರಗಿ

ಪ್ರತಿಭಟನೆಗೆ ಅನುಮತಿ ಪಡೆಯದೆ ಕಲಬುರಗಿಯಲ್ಲಿ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್​ಐಆರ್ ದಾಖಲಿಸಬೇಕು ಎಂದು ಬಿಜೆಪಿ ನಾಯಕಿ ದಿವ್ಯ ಹಾಗರಗಿ ಆಗ್ರಹಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಆಗ್ರಹ

author img

By

Published : Jun 30, 2020, 1:51 PM IST

ಕಲಬುರಗಿ: ಪ್ರತಿಭಟನೆಗೆ ಅನುಮತಿ ಪಡೆಯದೆ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಆಗ್ರಹಿಸಿ, ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ನಿನ್ನೆ ಕಲಬುರಗಿಯಲ್ಲಿ ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಡೆಸಿದ ಸೈಕಲ್ ಜಾಥಾಕ್ಕೆ ಸರ್ಕಾರದಿಂದ ಅನುಮತಿ ಪಡೆದಿಲ್ಲ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಪ್ರಕರಣಗಳು ಹೆಚ್ಚುವ ಆತಂಕ ಎದುರಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಆಗ್ರಹ

ಕೂಡಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಹಾಗೂ ಪ್ರತಿಭಟನೆ ತಡೆಯಲು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.