ಸೇಡಂ: ಪಟ್ಟಣದ ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಆಡಿಟೋರಿಯಂನಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಕಲಬುರಗಿ ವಿಭಾಗೀಯ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಪ್ಪ ಕೊಳ್ಳಿ ತಿಳಿಸಿದ್ದಾರೆ.
ಬೆಳಗ್ಗೆ 10-30ಕ್ಕೆ ನಡೆಯಲಿರುವ ಸಭೆಯಲ್ಲಿ ನಳಿನ್ ಕುಮಾರ್ ಕಟಿಲ್ ಜೊತೆ ಉಪ ಮುಖ್ಯಮಂತ್ರಿ ಹಾಗೂ ಕಲುಬುರಗಿ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ, ಪಶು ಸಂಗೋಪನಾ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಆಯಾ ಜಿಲ್ಲೆಗಳ ಅಧ್ಯಕ್ಷರು, ಪ್ರಮುಖರು ಆಗಮಿಸಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ಪರ್ವತರೆಡ್ಡಿ ಪಾಟೀಲ್ ನಾಮವಾರ್ ತಿಳಿಸಿದ್ದಾರೆ.