ಕಲಬುರಗಿ : ಪಕ್ಷ ನನಗೆ ಸೂಕ್ತ ಸ್ಥಾನ ಕೊಡಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಕಣ್ಣೀರಿಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಕಾರ್ಯಕರ್ತೆಯರ ಸಭೆಯಲ್ಲಿ ಮಾಜಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸಾವಿತ್ರಿ ಕುಳಗೇರಿ ಅವರು ಸಚಿವೆ ಶೋಭಾ ಕರಂದ್ಲಾಜೆ ಅವರ ಎದುರೇ ಗಳಗಳನೇ ಅತ್ತು ನೋವು ತೋಡಿಕೊಂಡಿದ್ದಾರೆ.
25 ವರ್ಷದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂ 31 ಬಿಜೆಪಿ ಟೆಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಪಕ್ಷದ ನಾಯಕರು ನನಗೆ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ.
ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನ ಗುರುತಿಸುವ ಕೆಲಸವಾಗುತ್ತಿಲ್ಲ. ನಿನ್ನೆ ಮೊನ್ನೆ ಬಂದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟು. ಪಕ್ಷ ನಿಷ್ಠರಿಗೆ ಅಧಿಕಾರದಿಂದ ವಂಚಿಸಲಾಗಿದೆ ಎಂದು ಅಳಲು ತೋಡಿಕೊಂಡರು.
ಇದನ್ನೂ ಓದಿ:ನಾನು ಹುಟ್ಟು ಹೋರಾಟಗಾರ, ಟೀಕಿಸಿದವರಿಗೆ ಉತ್ತರ ನೀಡುತ್ತೇನೆ : ಹೆಚ್ ಡಿ ದೇವೇಗೌಡರ ಶಪಥ
ಎನ್ ರವಿಕುಮಾರ್ ಅವರು ನನಗೆ ಮುಂಬರುವ ದಿನಗಳಲ್ಲಿ ಸೂಕ್ತ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ, ಪಕ್ಷದಲ್ಲೇ ಇದ್ದು ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.