ಕಲಬುರಗಿ: ಮುಂಬರುವ ಜಿಲ್ಲಾ-ತಾಲೂಕು ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳ ಕಡೆ ಹೆಚ್ಚಿನ ಗಮನ ಹರಿಸಲು ಬಿಜೆಪಿಯಿಂದ ಜನಶಕ್ತಿ ಸಮಾವೇಶ ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬಲ ಸಿಕ್ಕಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. 86,183 ಸದಸ್ಯರ ಪೈಕಿ 45,246 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಶೇ. 52.4ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶವೇ ಇದಕ್ಕೆ ಮುಖ್ಯ ಕಾರಣ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನಸೇವಕ ಸಮಾವೇಶ ಆಯೋಜಿಸಲಾಗುತ್ತಿದೆ. ಜನವರಿ 11ರಿಂದ ಮೂರು ದಿನಗಳ ರಾಜ್ಯದ ವಿವಿಧೆಡೆ ಬಿಜೆಪಿ ಜನಸೇವಕ ಸಮಾವೇಶಗಳು ನಡೆಯಲಿವೆ.