ETV Bharat / state

ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ, ಪತಿಯಿಂದಲೇ ಕೊಲೆ ಶಂಕೆ

author img

By

Published : Oct 8, 2021, 11:33 AM IST

ಕಲಬುರಗಿಯಲ್ಲಿ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ. ಆದರೆ ಆಕೆಯ ಪತಿಯೇ ತಮ್ಮ ಮಗಳ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಫ್ಯಾನ್​ಗೆ ಶವ ನೇಣು ಹಾಕಿದ್ದಾನೆ ಎಂದು ಆಕೆಯ ತವರು ಮನೆಯವರು ಆರೋಪಿಸಿದ್ದಾರೆ‌.

body-of-woman-found-hanging-from-fan-in-kalaburagi
ಕಲಬುರಗಿ: ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ... ಪತಿಯಿಂದಲೇ ಕೊಲೆ?

ಕಲಬುರಗಿ: ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ದೊರೆತಿದ್ದು, ಪತಿಯೇ ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿ ಬಂದಿದೆ.

ನಗರದ ಪ್ರಗತಿ ಕಾಲೋನಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಜ್ಯೋತಿ (22) ಎಂಬವರು ಶವವಾಗಿ ಪತ್ತೆಯಾಗಿದ್ದಾಳೆ. ಏಳು ತಿಂಗಳ ಹಿಂದಷ್ಟೇ ಲೋಕೇಶ್ ಎಂಬ ವ್ಯಕ್ತಿಯೊಂದಿಗೆ ಜ್ಯೋತಿ ವಿವಾಹವಾಗಿತ್ತು. ಲೋಕೇಶ್ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇಡಂ‌ ಡಿಪೋದಲ್ಲಿ ಬಸ್​​ ಚಾಲಕನಾಗಿದ್ದಾನೆ. ಕಲಬುರಗಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಹಣಕ್ಕಾಗಿ‌ ಲೋಕೇಶ್ ಪ್ರತಿದಿನ ಜ್ಯೋತಿಗೆ ಪೀಡಿಸುತ್ತಿದ್ದನಂತೆ. ಅಲ್ಲದೆ, ಮದುವೆ ಸಮಯದಲ್ಲಿ 120 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂ.ಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ. ಆದರೂ ಕೂಡ ಲೋಕೇಶ್ ಜ್ಯೋತಿಗೆ ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಕಲಬುರಗಿ ಮಹಿಳಾ ಠಾಣೆಯಲ್ಲಿ ಪತಿ ಲೋಕೇಶ್ ಮತ್ತು ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ: ಅರುಣಾಚಲದಲ್ಲಿ ಚೀನಾ ಗಡಿ ತಕರಾರು: ಹಿಮ್ಮೆಟ್ಟಿಸಿದ ಭಾರತೀಯ ಸೇನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.