ಕಲಬುರಗಿ: ಪಾಲಕರು ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಕಲ್ಲಿನ ಕ್ವಾರಿಯ ನೀರಿನಲ್ಲಿ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಹೊರ ವಲಯದ ಆಫೀಸ್ ಕಣಿ ಪ್ರದೇಶದಲ್ಲಿ ನಡೆದಿದೆ.

ವಾಡಿ ಪಟ್ಟಣದ ಪೊಲಕಮ್ಮಾ ಬಡಾವಣೆಯ ನಿವಾಸಿ ಅಭಿಷೇಕ್ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.81ರಷ್ಟು ಫಲಿತಾಂಶ ಪಡೆದು, ತೇರ್ಗಡೆಯಾಗಿದ್ದನು.
ಆದರೆ, ಕಳೆದ ಎರಡು ದಿನಗಳ ಹಿಂದೆ, ಪಾಲಕರೊಂದಿಗೆ ಜಗಳವಾಡಿ ಮನೆಬಿಟ್ಟು ಹೋಗಿದ್ದನು. ಈಗ ಮೃತ ದೇಹವಾಗಿ ಪತ್ತೆಯಾಗಿದ್ದಾನೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.