ETV Bharat / state

ಕಲಬುರಗಿಯಲ್ಲಿ ಸರಣಿ ಅಪಘಾತ: ಅಣ್ಣ-ತಂಗಿ ಸ್ಥಳದಲ್ಲೇ ಸಾವು - ಕಲಬುರಗಿ ಸರಣಿ ಅಪಘಾತ

ಕಲಬುರಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್​ನಲ್ಲಿದ್ದ ಅಣ್ಣ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

kalburgi
ಕಲಬುರಗಿಯಲ್ಲಿ ಅಪಘಾತ
author img

By

Published : Jul 12, 2021, 12:30 PM IST

ಕಲಬುರಗಿ: ಜಿಲ್ಲೆಯಲ್ಲಿಂದು ದುರ್ಘಟನೆ ನಡೆದಿದೆ. ಬೈಕ್, ಟೆಂಪೋ ಮತ್ತು ಕಾರು ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಅಣ್ಣ ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿ ನಡೆದಿದೆ‌.

ಅಫಜಲಪುರ ತಾಲೂಕಿನ ಶಿವೂರು ಗ್ರಾಮದ ನಿವಾಸಿಗಳಾದ ಅಜಯ್ ರೋಡಗಿ (29) ಹಾಗೂ ಪ್ರೇಮಾ ಪ್ರವೀಣ (27) ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮೃತರು ಬೈಕ್​ನಲ್ಲಿ ಕಲಬುರಗಿಯಿಂದ ಅಫಜಲಪುರಕ್ಕೆ ಹೊರಟಿದ್ದರು. ಈ ವೇಳೆ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ.

kalburgi
ಕಲಬುರಗಿಯಲ್ಲಿ ಅಪಘಾತ

ಇನ್ನೂ ಐವರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.