ಕಲಬುರಗಿ: ಮಾರಕಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.
ರಫೀಕ್ ಖಾಸಿಂ(28) ಕೊಲೆಯಾದ ಯುವಕ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈತ ನಗರದ ಎಂಎಸ್ಕೆ ಮಿಲ್ ಹುಸೈನಿ ಗಾರ್ಡನ್ ನಿವಾಸಿ ಎಂದು ತಿಳಿದು ಬಂದಿದೆ. ರಫಿಕ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸಂಬಂಧಿಕರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.