ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಲಿಕ್ಯಾಪ್ಟರ್ ಲ್ಯಾಂಡಿಗ್ ವೇಳೆ ಭದ್ರತಾ ಲೋಪ ಕಂಡುಬಂದಿತು. ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡುತ್ತಿದ್ದ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿರುವ ಕಾರಣ ಹೆಲಿಕಾಪ್ಟರ್ ಅನ್ನು ಮತ್ತೆ ಟೇಕ್ ಆಫ್ ಮಾಡಿ ಕೆಲ ಹೊತ್ತಿನ ಬಳಿಕ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.
ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದು, ಪಟ್ಟಣದ ಹೊರವಲಯದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು. ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವಾಗ ಗಾಳಿಗೆ ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಲಾಗಿದ್ದ ಪ್ಲಾಸ್ಟಿಕ್ ಚೀಲಗಳು, ವಸ್ತುಗಳು ಹಾರಿಕೊಂಡು ಬದಿವೆ. ಈ ಹಿನ್ನೆಲೆ ತಕ್ಷಣ ಪೈಲೆಟ್ ಎಚ್ಚೆತ್ತು ಟೇಕ್ ಆಫ್ ಮಾಡಿ ಆಕಾಶದಲ್ಲಿ ಒಂದೆರಡು ಸುತ್ತು ಹೊಡೆದರು. ಪೊಲೀಸರು ಬಳಿಕ ಪ್ಲಾಸ್ಟಿಕ್ ಚೀಲಗಳ ತೆರವು ಮಾಡಿದರು. ನಂತರ ಪೈಲೆಟ್ ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದರು. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದಿರುವುದರಿಂದ ಹೀಗಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಕಾಂಗ್ರೆಸ್‌ನವರು ದಿಂಬು, ಹಾಸಿಗೆಯನ್ನೂ ಬಿಟ್ಟಿಲ್ಲ; ಸಿದ್ದರಾಮಯ್ಯ ಸಚಿವರುಗಳಿಗೆ 'ಟಾರ್ಗೆಟ್' ಕೊಡ್ತಿದ್ರು: ಸಿಎಂ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು. ಕಾಂಗ್ರೆಸ್ನಲ್ಲಿ ಕೆಲವರು ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸ್ಪರ್ಧೆಗಿಳಿದಿದ್ದಾರೆ. ಅವರು ಕಾಣುತ್ತಿರುವ ಕನಸು ನನಸಾಗುವುದಿಲ್ಲ. ಜನ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ. ಮೊದಿಯವರಿಗೆ ಸರಿಸಮನಾಗಿ ಕಾಂಗ್ರೆಸ್ನಲ್ಲಿ ಯಾವ ನಾಯಕರಿದ್ದಾರೆ? ಎಂದು ಪ್ರಶ್ನೆ ಮಾಡಿದರು.
ವಿರೂಪಾಕ್ಷಪ್ಪ ಬಂಧನ: ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೇ ನೀಡಿದ ಅವರು, ಭ್ರಷ್ಟಾಚಾರ ಯಾರೇ ಮಾಡಿದ್ದರು ಅದು ಅಕ್ಷಮ್ಯ ಅಪರಾಧ. ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರಿಗೆ ನಮ್ಮ ಬೆಂಬಲವಿಲ್ಲ. ಅವರ ಮೇಲೆ ಏನು ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತೆ. ಅವರನ್ನು ಉಳಿಸುವ ಪ್ರಯತ್ನ ಮಾಡುವ ಮಾತಿಲ್ಲ. ಸಿದ್ದರಾಮಯ್ಯ ಅವರಿಗೆ ಬಾಯಿಗೆ ಬಂದಂತೆ ಮಾತನಾಡುವುದು ಅಭ್ಯಾಸವಿದೆ. ಇಂದು ಅಥವಾ ನಾಳೆ ವಿರೂಪಾಕ್ಷಪ್ಪ ಬಂಧನವಾಗುತ್ತೆ. ಎಲ್ಲಾ ರೀತಿ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೇಳಿದ್ದೇವೆ ಎಂದು ಹೇಳಿದರು.
ಸಮಲತಾ ಬಿಜೆಪಿ ಪಕ್ಷ ಸೇರ್ಪಡೆ: ಮಂಡ್ಯದಲ್ಲಿ ಸಮಲತಾ ಅಂಬರೀಶ್ ಬಿಜೆಪಿ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ ಬಿಎಸ್‌ವೈ, ಸಮಲತಾ ಬಿಜೆಪಿಗೆ ಬರುವ ವಿಚಾರ ಗೊತ್ತಿಲ್ಲ. ಪಕ್ಷ ಸೇರುವವರ ಬಗ್ಗೆ ವರಿಷ್ಠರು ತೀರ್ಮಾಣ ಕೈಗೊಳ್ಳುತ್ತಾರೆ. ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಒಳ್ಳೆ ಸ್ಥಾನಮಾನ ಕೊಟ್ಟಿದೆ. ಕೆಆರ್ ಪೇಟೆಯಲ್ಲಿ ನಾರಾಯಣಗೌಡ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದೇವೆ. ಹೀಗಾಗಿ ಯಾರೂ ಪಕ್ಷ ಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗ್ತಿದೆ ಟಿಕೆಟ್ ಆಕಾಂಕ್ಷಿಗಳ ಒತ್ತಡ: ಸಂಧಾನದ ಪ್ರಯತ್ನಕ್ಕೆ ಸಿಗುತ್ತಾ ಯಶಸ್ಸು?
ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೇನೆ. ಬಿಜೆಪಿ ನನಗೆ ಒಳ್ಳೆಯ ಸ್ಥಾನ ಮಾನ ನೀಡಿದೆ. ಬಿಎಸ್‌ವೈ ಅವರಿಗೆ ಕೊಟ್ಟಂತಹ ಸ್ಥಾನಮಾನ ಗೌರವ ಯಾರಿಗೂ ಕೊಟ್ಟಿಲ್ಲ. ರಾಷ್ಟ್ರೀಯ ನಾಯಕರೊಂದಿಗೆ ಕುಳಿತುಕೊಳ್ಳುವಂತ ಅವಕಾಶ ನೀಡಿದ್ದಾರೆ. ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ನನಗೂ ವಯಸ್ಸಾಗಿದೆ. ಬೇರೆಯವರಿಗೆ ಅವಕಾಶ ಸಿಗಬೇಕು ಎಂದು ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದರು.
-
#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023 " class="align-text-top noRightClick twitterSection" data="
">#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023#WATCH | Kalaburagi | A helicopter, carrying former Karnataka CM and senior leader BS Yediyurappa, faced difficulty in landing after the helipad ground filled with plastic sheets and waste around. pic.twitter.com/BJTAMT1lpr
— ANI (@ANI) March 6, 2023
ಮೊನ್ನೆಯಷ್ಟೇ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದ್ದರು. ಈಗ ಬೀದರ್ ಯಾತ್ರೆ ಮುಗಿಸಿ ಕಲಬುರಗಿಗೆ ಕಾಲಿಟ್ಟಿರುವ ರಥಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಯಾತ್ರೆ ತೆರಳುತ್ತಿದೆ.