ಕಲಬುರಗಿ: ಸ್ಟೇರಿಂಗ್ ತುಂಡಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, 25 ಜನ ಗಾಯಗೊಂಡ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.