ಕಲಬುರಗಿ: ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿಂದು ವಿವಿಧ ಮುಸ್ಲಿಂ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ.
ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಮುಸ್ಲಿಂ ಸಂಘಟನೆಗಳು ನಿರ್ಧರಿಸಿವೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಸೇರುವ ನಿರೀಕ್ಷೆ ಇದೆ.
ಆದ್ರೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಸೀದಿಯಲ್ಲಿ ಧಾರ್ಮಿಕ ಪ್ರಾರ್ಥನೆ ಇರುವ ಹಿನ್ನೆಲೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣ ಹೊರತುಪಡಿಸಿ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಇರಲಿದೆ ಎಂದು ಡಿಸಿಪಿ ಕಿಶೋರ್ ಬಾಬು ತಿಳಿಸಿದ್ದಾರೆ.