ETV Bharat / state

ಚಿಂಚೋಳಿ ಉಪ-ಚುನಾವಣೆ: ಕೈ-ಕಮಲ ನಾಯಕರಿಂದ ಇಂದು ಅಬ್ಬರದ ಮತಬೇಟೆ - etv bharat

ರಂಗೇರಿದ ಚಿಂಚೋಳಿ ಉಪಚುನಾವಣೆಯ ಕದನ ಕಣ- ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ- ಕಾಂಗ್ರೆಸ್​ ಅಭ್ಯರ್ಥಿ ರಾಥೋಡ್​ ಪರ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರಿಂದ ಮತಬೇಟೆ

ಕೈ-ಕಮಲಗಳಿಂದ ಅಬ್ಬರದ ಪ್ರಚಾರ ಶುರು
author img

By

Published : May 13, 2019, 12:06 PM IST

ಕಲಬುರಗಿ: ಚಿಂಚೋಳಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಇಂದಿನಿಂದ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಹಲವೆಡೆ ಮೂರು ದಿನಗಳ ಕಾಲ ಪ್ರಚಾರ ಮಾಡಲಿರುವ ಯಡಿಯೂರಪ್ಪ, ಈ ವೇಳೆ ಹಲವು ವೀರಶೈವ ಮುಖಂಡರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ. ಪ್ರಚಾರದಲ್ಲಿ ಯಡಿಯೂರಪ್ಪಗೆ, ಬಸವರಾಜ್ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ. ಇತ್ತ ಕೆ ಎಸ್ ಈಶ್ವರಪ್ಪ ಸಹ ಚಿಂಚೋಳಿ ಕ್ಷೇತ್ರದಲ್ಲಿ ಇಂದು ಪ್ರಚಾರ ಕೈಗೊಳ್ಳಲಿದ್ದಾರೆ.

ಕಾಂಗ್ರೆಸ್​ ನಾಯಕರು ಕೂಡ ತಮ್ಮ ಅಭ್ಯರ್ಥಿ ರಾಥೋಡ್​ ಪರ ಪ್ರಚಾರ ಕಣಕ್ಕೆ ಧುಮುಕಿದ್ದು, ಇಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಚಿಂಚೋಳಿ ಕ್ಷೇತ್ರದಲ್ಲಿ ಮತಬೇಟೆ ನಡೆಸಲಿದ್ದಾರೆ.

Intro:ಕಲಬುರಗಿ: ಚಿಂಚೋಳಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ಪರವಾಗಿ ಮಾಜಿ ಸಿಎಂ ಯಡಿಯೂರಪ್ಪ ಇಂದಿನಿಂದ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಹಲವಡೆ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ಇಂದಿನಿಂದ ಮೂರು ದಿನಗಳ ಕಾಲ ಕೈಗೊಳ್ಳಲಿದ್ದಾರೆ. ಈ ವೇಳೆ ವೀರಶೈವ ಮುಖಂಡರನ್ನು ಬೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ. ಬಸವರಾಜ್ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ. ಇದಲ್ಲದೆ ಕೆ ಎಸ್ ಈಶ್ವರಪ್ಪ ಸಹ ಚಿಂಚೋಳಿ ಕ್ಷೇತ್ರದಲ್ಲಿ ಇಂದು ಪ್ರಚಾರ ಕೈಗೊಳ್ಳಲಿದ್ದಾರೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಸುಭಾಶ್ ರಾಥೋಡ ಪರವಾಗಿ ಮೂರು ದಿನಗಳ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಭರ್ಜರಿ ಪ್ರಚಾರ ಕೈಗೊಂಡು ತೆರಳುತ್ತಾರೆ. ಇಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಇಂದು ಚಿಂಚೋಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಕಳೆದ ಕೆಲ ದಿನಗಳಿಂದ ಎರಡು ಪಕ್ಷದ ಘಟಾನುಘಟಿ ನಾಯಕರು ಚಿಂಚೋಳಿ ಕ್ಷೇತ್ರದಲ್ಲಿ ಬೀಡು ಬಿಡುತ್ತಿದ್ದು, ಇಂದೂ ಸಹ ಮತಬೇಟೆ ಮುಂದುವರಿಸಲಿದ್ದಾರೆ.Body:ಕಲಬುರಗಿ: ಚಿಂಚೋಳಿ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾದವ್ ಪರವಾಗಿ ಮಾಜಿ ಸಿಎಂ ಯಡಿಯೂರಪ್ಪ ಇಂದಿನಿಂದ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಹಲವಡೆ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ಇಂದಿನಿಂದ ಮೂರು ದಿನಗಳ ಕಾಲ ಕೈಗೊಳ್ಳಲಿದ್ದಾರೆ. ಈ ವೇಳೆ ವೀರಶೈವ ಮುಖಂಡರನ್ನು ಬೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ. ಬಸವರಾಜ್ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ. ಇದಲ್ಲದೆ ಕೆ ಎಸ್ ಈಶ್ವರಪ್ಪ ಸಹ ಚಿಂಚೋಳಿ ಕ್ಷೇತ್ರದಲ್ಲಿ ಇಂದು ಪ್ರಚಾರ ಕೈಗೊಳ್ಳಲಿದ್ದಾರೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಸುಭಾಶ್ ರಾಥೋಡ ಪರವಾಗಿ ಮೂರು ದಿನಗಳ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಭರ್ಜರಿ ಪ್ರಚಾರ ಕೈಗೊಂಡು ತೆರಳುತ್ತಾರೆ. ಇಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಇಂದು ಚಿಂಚೋಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಕಳೆದ ಕೆಲ ದಿನಗಳಿಂದ ಎರಡು ಪಕ್ಷದ ಘಟಾನುಘಟಿ ನಾಯಕರು ಚಿಂಚೋಳಿ ಕ್ಷೇತ್ರದಲ್ಲಿ ಬೀಡು ಬಿಡುತ್ತಿದ್ದು, ಇಂದೂ ಸಹ ಮತಬೇಟೆ ಮುಂದುವರಿಸಲಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.