ಕಲಬುರಗಿ: ಕೊರೊನಾ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಸೇರಿ 23 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟೆ ಗ್ರಾಮದ ಕಲ್ಯಾಣ ಮಂಟಪವೊಂದರಲ್ಲಿ ಮೇ 13 ರಂದು ಸಭೆ ನಡೆದಿತ್ತು. ಕೊರೊನಾ ಜಾಗೃತಿ ಕುರಿತು ಶರಣಪ್ರಕಾಶ ಪಾಟೀಲ ಸಭೆ ನಡೆಸಿದ್ದರು. ಕಾಂಗ್ರೆಸ್ ಮುಖಂಡರು, ತನ್ನ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ಪಾಟೀಲ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ಶರಣಪ್ರಕಾಶ ಪಾಟೀಲ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಮಾಜಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಕೇಸ್ ಸುಲೇಪೇಟೆ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮುನೀರ್ ಅಹ್ಮದ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸುಲೇಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.