ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 506ರಡಿ ಜೀವ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಶೂಟ್ ಮಾಡೋದಾದರೆ ಮಾಡಿ.. ನಾವೂ ನಿಮಗೆ ಶೂಟ್ ಮಾಡ್ತೇವೆ: ಪ್ರಿಯಾಂಕ್ಗೆ ಬಿಜೆಪಿ ಮುಖಂಡನ ಎಚ್ಚರಿಕೆ
ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡಲು ನಾವು ರೆಡಿ ಇದ್ದೇವೆ ಎಂದು ಮಣಿಕಂಠ ರಾಠೋಡ್ ಹೇಳಿಕೆ ನೀಡಿದ್ದರು. ಹೀಗಾಗಿ ಮಣಿಕಂಠ ರಾಠೋಡ್ ಹೇಳಿಕೆ ಖಂಡಿಸಿ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಶನಿವಾರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಎಸ್ಪಿ ಇಶಾ ಪಂತ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮಣಿಕಂಠ ರಾಠೋಡ್ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.