ಕಲಬುರಗಿ: ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡುವ ಆರ್ಸಿಇಪಿ ಒಪ್ಪಂದಿಂದ ಹಿಂದೆ ಸರಿಯುವಂತೆ ರೈತ ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಕಾರ್ಯದರ್ಶಿ ಹೆಚ್.ವಿ.ದಿವಾಕರ್, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮತ್ತು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಿದಲ್ಲಿ ಅದು ರೈತರ ಪಾಲಿನ ಮರಣ ಶಾಸನವಾಗಲಿದೆ. ರೈತ ವಿರೋಧಿಯಾಗಿರೋ ಈ ಒಪ್ಪಂದದಿಂದ ಕೇಂದ್ರ ಸರ್ಕಾರ ಕೂಡಲೇ ಹಿಂದೆ ಸರಿಯಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೇ, ಕೇಂದ್ರದ ಧೋರಣೆ ಖಂಡಿಸಿ ಅಕ್ಟೋಬರ್ 22ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.