ಕಲಬುರಗಿ: ಜಿಲ್ಲೆಯ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಪ್ರಾರಂಭಗೊಂಡಿದ್ದು, ಇಂದು ಮತ್ತು ನಾಳೆ ಎರಡು ದಿನ ನಾಲ್ಕು ವಿಷಯಗಳ ಪರೀಕ್ಷೆಗಳು ನಡೆಯಲಿವೆ.
ಕಲಬುರಗಿ ನಗರದಲ್ಲಿ 23, ಚಿತ್ತಾಪುರ ಮತ್ತು ಆಳಂದ ಪಟ್ಟಣದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರಗಳಿವೆ. ಒಟ್ಟು 8,456 ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಸೋಂಕಿತ ವಿದ್ಯಾರ್ಥಿಗಳು
ಇಬ್ಬರು ಸೋಂಕಿತ ವಿದ್ಯಾರ್ಥಿಗಳೂ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಾರೆ. ಅವರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ನಲ್ಲಿಯೇ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ವೈದ್ಯರೇ ಪರೀಕ್ಷಾ ಮೇಲ್ವಿಚಾರಕರಾಗಿದ್ದಾರೆ.