ಕಲಬುರಗಿ: ಸರೀನ್ ಕಮಿಟಿ ವರದಿ ಪ್ರಕಾರ ಕಲಬುರಗಿಯಲ್ಲಿ ರೈಲ್ವೆ ವಲಯ ಸ್ಥಾಪನೆ ಮಾಡಬೇಕೆಂದು ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆ ಆಗ್ರಹಿಸಿದೆ. ಕಲಬುರಗಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಅಮರನಾಥ ಪಾಟೀಲ, ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವರಾಗಿದ್ದಾಗ 5 ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ನಂತರದಲ್ಲಿ ಬಂದ ಸರ್ಕಾರದಿಂದ ಕಡೆಗಣನೆ ಮಾಡಲಾಗಿದೆ ಎಂದು ಆರೋಪಿಸಿದರು.
ಸರೀನ್ ವರದಿಯಲ್ಲಿ ಶಿಫಾರಸು ಮಾಡಿದಂತೆ 8 ಕಡೆಯೂ ರೈಲ್ವೆ ವಲಯಗಳ ಸ್ಥಾಪನೆಯಾಗಿವೆ. ಕಲಬುರಗಿ ಹೊರತುಪಡಿಸಿ ಉಳಿದ ಕಡೆ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆಯಾಗಿದೆ. ಈ ಬಜೆಟ್ನಲ್ಲಾದರೂ ಕಲಬುರಗಿ ರೈಲ್ವೆ ವಲಯ ಸ್ಥಾಪನೆಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪಿಸಬೇಕು, ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. 371ಜೆ ಜಾರಿಗಾಗಿ ವಿಶೇಷ ಅನುದಾನ ನೀಡಬೇಕು. ಹಿಂದುಳಿದ ಭಾಗದ ಅಭಿವೃದ್ಧಿಗೆ ಪೂರಕವಾದ ಯೋಜನೆ ಪ್ರಕಟಿಸಲು ಪಾಟೀಲ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆ ವಿಚಾರದಲ್ಲಿ ಜನರ ಅಸಮಾಧಾನ