ಕಲಬುರಗಿ : ಚಿತ್ತಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಾಲ್ವರು ಸಿಬ್ಬಂದಿ ಹಾಗೂ ಪುರಸಭೆ ಕಚೇರಿಯಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಎರಡು ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ.
ತಹಶೀಲ್ದಾರ್ ಕಚೇರಿಯಲ್ಲಿ ಓರ್ವ ಕಂದಾಯ ನಿರೀಕ್ಷಕ ಹಾಗೂ ಮೂರು ಜನ ಗ್ರಾಮ ಲೆಕ್ಕಿಗರಿಗೆ ಮತ್ತು ಪುರಸಭೆಯ ಮುಖ್ಯಾಧಿಕಾರಿ, ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರೆಲ್ಲರಿಗೂ ಚಿತ್ತಾಪುರದ ಪಟ್ಟಣದ ವಸತಿ ಗೃಹದಲ್ಲಿ ನಿರ್ಮಿಸಿರುವ ಐಸೊಲೇಷನ್ ಕೇಂದ್ರಕ್ಕೆ ರವಾನಿಸಲಾಗಿದೆ.
ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನಗಳ ಮಟ್ಟಿಗೆ ತಹಶೀಲ್ದಾರ್ ಕಚೇರಿ ಹಾಗೂ ಪುರಸಭೆ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಕಚೇರಿ ಪುನರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಚಿತ್ತಾಪುರ ತಹಶೀಲ್ದಾರ್ ಗಂಟಲು ದ್ರವದ ಮಾದರಿ ವರದಿ ಹಾಗೂ ಉಳಿದ ಸಿಬ್ಬಂದಿಯ ವರದಿ ನೆಗೆಟಿವ್ ಎಂದು ಬಂದಿರೋದ್ರಿಂದ ನಿರಾತಂಕವಾಗಿದೆ.