ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣದ ಕಿಂಗ್‌ಪಿನ್ ಆರ್ ಡಿ ಪಾಟೀಲ್‌ನನ್ನು ಮತ್ತೆ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಪಡೆದುಕೊಂಡಿದೆ.
ಸಿಐಡಿ ಡಿವೈಎಸ್ಪಿ ವೀರೇಂದ್ರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಬ್ಲೂಟೂತ್ ಕಿಂಗ್‌ಪಿನ್ ಆರ್ ಡಿ ಪಾಟೀಲ್‌ನನ್ನು ಮೇ 30ರವರೆಗೆ ಕಸ್ಟಡಿಗೆ ಪಡೆದು ಕಲಬುರಗಿ ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಎಂಎಸ್ಐ ಕಾಲೇಜು ಪರೀಕ್ಷಾ ಕೇಂದ್ರ ಅಕ್ರಮ ಕುರಿತಂತೆ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ತನಿಖೆ ಕೈಗೊಂಡ ಸಿಐಡಿ ತಂಡ ಕಲಬುರಗಿಯ ಸಿಐಡಿ ಕಚೇರಿಯಲ್ಲಿ ಆರ್ ಡಿ ಪಾಟೀಲ್‌ನನ್ನು ತೀವ್ರ ವಿಚಾರಣೆ ನಡೆಸುತ್ತಿದೆ. ಪರೀಕ್ಷೆ ಅಕ್ರಮದಲ್ಲಿ ಇನ್ನಷ್ಟು ಅಧಿಕಾರಿಗಳು, ಮಧ್ಯವರ್ತಿಗಳು, ಅಭ್ಯರ್ಥಿಗಳ ಬಂಧನ ಸಾಧ್ಯತೆ ಇದೆ.
ಇದನ್ನೂ ಓದಿ: ಮಳಲಿ ಮಸೀದಿ ಸಂಬಂಧ ತಾಂಬೂಲ ಪ್ರಶ್ನೆ; ಗುರುಮಠದ ಸಾನಿಧ್ಯ ಬೆಳಕಿಗೆ, ಒಗ್ಗಟ್ಟಿನ ಪರಿಹಾರಕ್ಕೆ ಸೂಚನೆ