ETV Bharat / state

ಬಿಎಸ್​ವೈ ಈ ಕೇಸ್​ನಲ್ಲಿ ಗೆದ್ದು ಬರುತ್ತಾರೆ.. ಪಿಎಂ ಮೋದಿ ದಸರಾಗೆ ಬರುವುದಿಲ್ಲ- ಸಿಎಂ ಬೊಮ್ಮಾಯಿ - ಮೋದಿ ದಸಾರಗೆ ಬರುವುದಿಲ್ಲ ಎಂದ ಸಿಎಂ ಬೊಮ್ಮಾಯಿ

ಬಿಎಸ್​ವೈ ವಿರುದ್ಧದ ತನಿಖೆ ನಡೆಯುತ್ತಿದ್ದು, ಅವರು ಆ ಕೇಸ್​ನಲ್ಲಿ ಗೆದ್ದು ಬರುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕೆ ಪಿಎಂ ಮೋದಿ ಬರುವುದಕ್ಕೆ ಆಗುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Bommai reaction on BS Yediyurappa case  Kalyan Karnataka Liberation Day  Liberation Day at Kalaburagi  CM Basavaraj Bommai  ಕಲ್ಯಾಣ ಕರ್ನಾಟಕ ಇತಿಹಾಸ  ಹೈದರಾಬಾದ್ ಕರ್ನಾಟಕ ಇತಿಹಾಸ  ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ  ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022  ದಸರಾ ಮಹೋತ್ಸವಕ್ಕೆ ಪಿಎಂ ಮೋದಿ  ಸಿಎಂ ಬಸವರಾಜ ಬೊಮ್ಮಾಯಿ  ಮೋದಿ ದಸಾರಗೆ ಬರುವುದಿಲ್ಲ ಎಂದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
author img

By

Published : Sep 17, 2022, 1:48 PM IST

ಕಲಬುರಗಿ: ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ‌ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ‌ ಪ್ರತಿಕ್ರಿಯೇ ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್​ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ‌ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ‌ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ‌ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ದುರ್ಘಟನೆ ನಡೆದರೂ ರಾಜ್ಯ ಆರೋಗ್ಯ ಸಚಿವ ಸುಧಾಕರ್​ ಭೇಟಿ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ದುರ್ಘಟನೆಯಿಂದ ನಮ್ಮ‌ ಮನಸಿಗೂ ನೋವಾಗಿದೆ. ಈ ಬಗ್ಗೆ ತನಿಖೆ ಕೂಡಾ ನಡೆದಿದೆ. ವರದಿ ಬಂದ ನಂತರ ಕ್ರಮ‌ ಕೈಗೊಳ್ಳಲಾಗುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗರಂ ಆಗೋದು ಅವರಿಗೆ ಬಿಟ್ಟ ವಿಚಾರ ಎಂದು ಕುಟುಕಿದರು.

ಸಂಪುಟ ವಿಸ್ತರಣೆ ವಿಷಯವಾಗಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ದಸರಾ ಸಂಭ್ರಮಕ್ಕೆ ಪ್ರಧಾನಿ ಮೋದಿ ಅವರು ಬರುವ ವಿಷಯ ಚರ್ಚೆಯಲ್ಲಿತ್ತು. ಸದ್ಯ ಅವರು ಬರೋಕ್ಕಾಗಲ್ಲ ಅಂತ ಸಂದೇಶ ನೀಡಿದ್ದಾರೆ ಎಂದರು. ಮಳೆಯ ಅವಾಂತರ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಿದೆ. ಬೆಳೆ ಹಾನಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಹಾನಿಗಿಂತ ದುಪ್ಪಟ್ಟು ಬೆಳೆ ಪರಿಹಾರ ರೈತರಿಗ ನೀಡಲಾಗುತ್ತಿದೆ ಎಂದು ತಿಳಿಸಿದರು.

ಓದಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸಿಎಂ ಬೊಮ್ಮಾಯಿ ಅಭಿವೃದ್ಧಿ ಭಾಷಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.