ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸರಡಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ವಿಮಾನ ನಿಲ್ದಾಣದಿಂದ ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ದಿನಾಚರಣೆ ಹಾಗೂ 'ವಿವೇಕ' ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಲಿದ್ದಾರೆ. ನಂತರ ಮುಖ್ಯಮಂತ್ರಿಗಳು ಸೇಡಂ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ಸ್ವಾಗತಕ್ಕೆ ಭವ್ಯವಾದ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಳಿಕ ಸಾಯಂಕಾಲ 3.50 ಕ್ಕೆ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ 4.50ಕ್ಕೆ ಬೆಂಗಳೂರು ಎಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಶಿಕ್ಷಣ ಸಚಿವ ಬಿ ಸಿ ನಾಗೇಶ ಸಿಎಂ ಜತೆಗಿರಲಿದ್ದಾರೆ.
ಇದನ್ನೂ ಓದಿ: ಖಾನಾಪುರದ 100 ಗ್ರಾಮಗಳ ಪ್ರತಿ ಮನೆಗೆ ಕುಡಿಯುವ ನೀರು ಯೋಜನೆ: ಸಿಎಂ ಬಸವರಾಜ್ ಬೊಮ್ಮಾಯಿ