ETV Bharat / state

ಪ್ರವಾಹ ಪೀಡಿತ ಉತ್ತರ ಜಿಲ್ಲೆಗಳಲ್ಲಿ ನಾಳೆ ಸಿಎಂ ವೈಮಾನಿಕ ಸಮೀಕ್ಷೆ - CM BS Yediyurappa news

ವರುಣದೇವನ ಅವಕೃಪೆಗೆ ತುತ್ತಾದ ಜಿಲ್ಲೆಗಳಿಗೆ ನಾಳೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿ, ಮಾಹಿತಿ ಪಡೆಯಲಿದ್ದಾರೆ..

CM BS Yediyurappa
ಸಿಎಂ
author img

By

Published : Oct 20, 2020, 7:27 PM IST

ಕಲಬುರಗಿ: ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾದ ಸಮಸ್ಯೆಗಳ ಕುರಿತು ಅರಿಯಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಈ ಭಾಗದ ಸ್ಥಿತಿಗತಿ ತಿಳಿಯಲು ಖುದ್ದು ಭೇಟಿ ಇಲ್ಲವೆ ವೈಮಾನಿಕ ಸಮೀಕ್ಷೆ ನಡೆಸುವಂತೆ ಜನಪ್ರತಿನಿಧಿಗಳು ಒತ್ತಡ ಹೇರಿದ್ದರು. ಇದಕ್ಕೆ ಸ್ಪಂದಿಸಿದ ಬಿಎಸ್​ವೈ, ನಾಳೆ ನಾಲ್ಕೂ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆಯಲಿದ್ದಾರೆ. ಬಳಿಕ ಕಲಬುರಗಿಯಲ್ಲಿ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲ್ಲಿದ್ದಾರೆ.

ನಾಳೆ ಮೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ವಿಶೇಷ ಪರಿಹಾರ ಘೋಷಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ ಸಂತ್ರಸ್ತರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.