ಬೆಂಗಳೂರು: ನ. 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬಿಡುಗಡೆಗೊಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಸಿಎಂ ಬೊಮ್ಮಾಯಿ, ಸಮ್ಮೇಳನದ ಯಶಸ್ವಿಗೆ ಸರ್ಕಾರದ ಸಹಕಾರ ಇರುತ್ತದೆ, ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ನಾನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಲಬುರಗಿಯ ಪತ್ರಕರ್ತರು ಬಹಳ ಹೃದಯವಂತರು. ಅವರು ಅಂದಿನಿಂದ ಇಂದಿನವರೆಗೂ ತಮ್ಮೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಮಾತನಾಡಿ, 25 ವರ್ಷಗಳ ನಂತರ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿದೆ. ಹೀಗಾಗಿ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದರು.
ಇದನ್ನು ಓದಿ: ಗೆಲುವಿನ ರೀತಿ ಸೋಲನ್ನೂ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ : ಸಿಎಂ ಬೊಮ್ಮಾಯಿ