ಕಲಬುರಗಿ: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ನದಿಸಿನ್ನೂರ ಬಳಿ ನಡೆದಿದೆ.
ಮೃತಪಟ್ಟವರನ್ನು ಜೇವರ್ಗಿ ತಾಲೂಕು ಗೋನಾಳ ಗ್ರಾಮದ ಕಲ್ಲಪ್ಪ ಅಪ್ಪಾಜಿ ಹಾಗೂ ಸಿದ್ಧಪ್ಪ ಕುರುಬರ(21) ಎಂದು ಗುರುತಿಸಲಾಗಿದೆ. ಇನ್ನು ಲಕ್ಕಪ್ಪ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.