ಕಲಬುರಗಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದ ಪ್ರಕರಣವನ್ನು ಖಂಡಿಸಿ ನಗರದಲ್ಲಿ ಹಂತಕರ ಪ್ರತಿಕೃತಿಯನ್ನು ನೇಣಿಗೇರಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಗರದ ಎಸ್ವಿಪಿ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ನನ್ನು ಪಾಪಿಗಳು ಶಿರಚ್ಛೇದ ಮಾಡಿದ್ದಲ್ಲದೆ, ನಾವೇ ಕೊಂದಿದ್ದು ಎಂದು ವಿಡಿಯೋ ಬೇರೆ ಹರಿಬಿಟ್ಟಿದ್ದರು. ಇದು ನಿಜಕ್ಕೂ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದರು. ಕೂಡಲೇ ಕೊಲೆಗಡುಕರನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು.
ರಾಜಸ್ಥಾನ ಸರ್ಕಾರದ ವಿರುದ್ಧ ಆರೋಪ: ನಗರದ ಎಸ್ಪಿ ವೃತ್ತ, ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಹಿಂದು ಜಾಗೃತಿ ಸೇನೆ, ಶಿವಾಜಿ ಬ್ರಿಗೇಡ್ ಹಾಗೂ ವಿವಿಧ ಹಿಂದು ಪರ ಸಂಘಟನೆಯ ಕಾರ್ಯಕರ್ತರು, ಈ ಘಟನೆಗೆ ರಾಜಸ್ಥಾನ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: 25 ವರ್ಷದ ಹಿಂದೆ ಕೊಲೆ ಮಾಡಿ ಪರಾರಿ: ಕಲಬುರಗಿಯಲ್ಲಿ ಸುಪಾರಿ ಕಿಲ್ಲರ್ ಕೊನೆಗೂ ಅಂದರ್