ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೂತನ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ, ಕಲಬುರಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಕಾಂಗ್ರೆಸ್ ಕಚೇರಿಯಿಂದ, ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದರು.