ETV Bharat / state

'ಕೊರೊನಾ ಹೆಸರಲ್ಲಿ ಸರ್ಕಾರದಿಂದ ಭ್ರಷ್ಟಾಚಾರ': ಕಲಬುರಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ - ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Congress Protest in the Kalburgi
ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
author img

By

Published : Aug 20, 2020, 3:01 PM IST

ಕಲಬುರಗಿ: ಕೊರೊನಾ ನಿಯಂತ್ರಣದ ಹೆಸರಲ್ಲಿ ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಛೇರಿ ಎದುರು ಸೇರಿದ ಮುಖಂಡರು, ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಾಂಕ್ರಾಮಿಕ ರೋಗ ನಿಯಂತ್ರಿಸಬೇಕಾದ ಸರ್ಕಾರದಿಂದಲೇ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ರೋಗದ ಹೆಸರಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.