ETV Bharat / state

ಕಲಬುರಗಿಯಲ್ಲಿ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಸಕಲ ಸಿದ್ಧತೆ - ಕಲಬುರಗಿ ಲೇಟೆಸ್ಟ್ ನ್ಯೂಸ್

ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

congress-sankalpa-samavesha-at-kalaburagi
ಕಲಬುರಗಿಯಲ್ಲಿ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಸಕಲ ಸಿದ್ಧತೆ
author img

By

Published : Jan 18, 2021, 10:04 AM IST

ಕಲಬುರಗಿ: ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇಂದು ನಡೆಯುವ ಸಮಾವೇಶಕ್ಕೆ ಕಾಂಗ್ರೆಸ್​ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಸಕಲ ಸಿದ್ಧತೆ

ರಾಜಾಪುರದಲ್ಲಿರುವ ಜೈ ಭವಾನಿ ಕಲ್ಯಾಣ ಮಂಟಪದಲ್ಲಿ ಜರುಗಲಿರುವ ಸಂಕಲ್ಪ ಸಮಾವೇಶ ಸಮಾರಂಭವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಜೊತೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕ ಹೆಚ್.ಮುನಿಯಪ್ಪ, ಜಿ‌‌.ಪರಮೇಶ್ವರ್​​, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ್​ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್​ ಸೇರಿದಂತೆ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್​, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಶಾಸಕರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.

ಓದಿ: ಪ್ರಭಾವಿ ಖಾತೆ ಮೇಲೆ ಕಣ್ಣು: ಬೆಂಗಳೂರಿಗೆ ದೌಡಾಯಿಸಿದ ಸಚಿವ ಉಮೇಶ್ ಕತ್ತಿ

ಬೆಳಗ್ಗೆ 11ಗಂಟೆಗೆ ಸಮಾವೇಶ ನಡೆಯಲಿದ್ದು, ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ. ನಂತರ ಸಿದ್ದರಾಮಯ್ಯನವರು ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7ಗಂಟೆಗೆ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ.

ನಗರದಾದ್ಯಂತ ರಾರಾಜಿಸುತ್ತಿರುವ ಪ್ಲೆಕ್ಸ್​​ ಹಾಗೂ ಬ್ಯಾನರ್​ಗಳು:

ಸಂಕಲ್ಪ ಸಮಾವೇಶದ ಹಿನ್ನೆಲೆ, ಕಲಬುರಗಿ ನಗರದಾದ್ಯಂತ ಕಾಂಗ್ರೆಸ್ ಪಕ್ಷದ ಪ್ಲೆಕ್ಸ್​​ ಹಾಗೂ ಬ್ಯಾನರ್​ಗಳು ರಾರಾಜಿಸುತ್ತಿವೆ. ನಗರದ ಸೇಡಂ ರಸ್ತೆಯಲ್ಲಿ ತ್ರಿವರ್ಣ ಧ್ವಜ ಆಕರ್ಷಕವಾಗಿದ್ದು, ಜೈ ಭವಾನಿ ಕಲ್ಯಾಣ ಮಂಟಪದಲ್ಲಿ ಬೃಹತ್ ವೇದಿಕರ ಸಿದ್ಧಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.