ಕಲಬುರಗಿ: ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಬಟ್ಟೆ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು, ಪೊಲೀಸ್ ವಾಹನ ಹತ್ತಿಸಿ ಕರೆದುಕೊಂಡು ಹೋದರು.
ಕಲಬುರಗಿ ಪ್ರವಾಸದಲ್ಲಿರುವ ಸಚಿವ ಜ್ಞಾನೇಂದ್ರ ನಗರದ ಗ್ರಾಂಡ್ ಹೊಟೇಲ್ ಬಳಿ ಬರುತ್ತಿದ್ದಂತೆ ಕಪ್ಪುಬಟ್ಟೆ ತೋರಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮಧ್ಯರಾತ್ರಿ ಕಳ್ಳರಂತೆ ಸಚಿವರು ಕಲಬುರಗಿಗೆ ಬಂದಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಸ್ವತಃ ಬಿಜೆಪಿ ಸಚಿವರು, ಶಾಸಕರು ಪತ್ರ ಬರೆದು ಸರ್ಕಾರದ ಗಮನ ಸೆಳೆದಿದ್ದಾರೆ. ಇವರಿಗೆ ಇದುವರೆಗೂ ಸಿಐಡಿ ನೋಟಿಸ್ ನೀಡಿಲ್ಲ. ಆದರೆ, ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ನೋಟಿಸ್ ನೀಡಿರುವುದು ಎಷ್ಟು ಸರಿ?. ಗೃಹ ಸಚಿವರು ಬೆದರಿಸುವ ತಂತ್ರ ಅನುಸರಿಸುತ್ತಿದ್ಧೀರಿ ಕಿಡಿಕಾರಿದರು.
ಇದನ್ನೂ ಓದಿ: 'ಪಿಎಸ್‌ಐ ಅಕ್ರಮದ ಬಗ್ಗೆ ಪ್ರಭು ಚವ್ಹಾಣ್ ಪತ್ರ ಬರೆದಾಗ ಯಾಕೆ ಕ್ರಮ ಕೈಗೊಳ್ಳಲಿಲ್ಲ?'