ಕಲಬುರಗಿ: ಬ್ಯಾಂಕ್ಗಳ ನಿರ್ವಹಣೆಯನ್ನು ಹೊರಗುತ್ತಿಗೆ ನೀಡುತ್ತಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಮುಷ್ಕರ ಇಂದು ಕೂಡ ಮುಂದುವರೆದಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದೂ ಸಹ ಬ್ಯಾಂಕ್ ನೌಕರರು, ನಗರದ ಎಸ್ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊರಗುತ್ತಿಗೆ ನಿರ್ಣಯ ವಾಪಸ್ ಪಡೆಯಬೇಕು. 2010ರ ಹೊಸ ಪಿಂಚಣಿ ಯೋಜನೆ ರದ್ದುಪಡಿಸಬೇಕು. ಶೀಘ್ರವೇ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿದರು.
ಇನ್ನು, ಬ್ಯಾಂಕ್ ನೌಕರರು ನಡೆಯುತ್ತಿರುವ ಮುಷ್ಕರದಿಂದ ಗ್ರಾಹಕರು, ಎಟಿಎಂಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಪರದಾಡುವಂತಾಗಿದೆ. ಕೆಲವೆಡೆ ಎಟಿಎಂಗಳಲ್ಲಿಯು ಹಣ ಸಿಗದೆ, ತೀರ ಸಮಸ್ಯೆ ಎದುರಿಸುವಂತಾಗಿದೆ.