ETV Bharat / state

ಕಲಬುರಗಿಯಲ್ಲಿ ಮುಂದುವರೆದ ವಾಂತಿ-ಭೇದಿ ಪ್ರಕರಣಗಳು: 60ಕ್ಕೂ ಹೆಚ್ಚು ಜನ ಅಸ್ವಸ್ಥ - ಅಲ್ಲೂರು (ಕೆ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು (ಬಿ) ಗ್ರಾಮದಲ್ಲಿ ವಾಂತಿ-ಬೇಧಿ ಪ್ರಕರಣಗಳು ಹೆಚ್ಚಾಗಿವೆ. ಇದುವರೆಗೂ ಸುಮಾರು 69 ಜನರು ಇದರಿಂದ ಅಸ್ವಸ್ಥಗೊಂಡಿದ್ದಾರೆ.

Continued vomiting cases in Kalaburagi
ಕಲಬುರಗಿಯಲ್ಲಿ ಮುಂದುವರೆದ ವಾಂತಿ-ಭೇದಿ ಪ್ರಕರಣಗಳು
author img

By

Published : Feb 23, 2020, 1:19 PM IST

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು (ಬಿ) ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣಗಳು ಮುಂದುವರೆದಿವೆ. ಇಂದು ಮತ್ತೆ 15 ಜನ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಅಲ್ಲೂರು (ಕೆ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿಯಲ್ಲಿ ಮುಂದುವರೆದ ವಾಂತಿ-ಭೇದಿ ಪ್ರಕರಣಗಳು

ವಾಂತಿ-ಬೇಧಿ ಮುಂದುವರಿಕೆಯಿಂದ ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಗ್ರಾಮದಲ್ಲಿಯೇ ಬೀಡುಬಿಟ್ಟ ವೈದ್ಯರ ತಂಡದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಗ್ರಾಮಕ್ಕೆ ಪೂರೈಕೆಯಾಗುವ 8 ಜಲಮೂಲಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಗ್ರಾಮದ ಜಲ ಮೂಲ ಕುಡಿಯಲು ಯೋಗ್ಯವಿಲ್ಲ ಎಂದು ವರದಿ ಬಂದಿದೆ. ಇದರಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.

ಜಲಮೂಲ ಕಲುಷಿತಗೊಂಡ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಗ್ರಾಮ ಪಂಚಾಯ್ತಿಗೆ ಸೂಚನೆ ನೀಡಲಾಗಿದೆ. ವಾಂತಿ-ಬೇಧಿಯಿಂದ 60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು. ಇದೀಗ ಅಸ್ವಸ್ಥಗೊಂಡವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಜನತೆಯಲ್ಲಿ ಭೀತಿ ಸೃಷ್ಟಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.