ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಗೂ ಕೊರೊನಾ ಬಿಸಿ ತಟ್ಟಿದ್ದು, ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಪಾಲಿಕೆ ಸಿಬ್ಬಂದಿಗೆ ಸೋಂಕು ತಗುಲಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸೋಂಕಿತ ಜನ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಲಾಗುತ್ತಿದ್ದು, ಸದ್ಯ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ವೈರಸ್ ಹರಡುವ ಭೀತಿಯಿಂದಾಗಿ ಮಹಾನಗರ ಪಾಲಿಕೆಗೆ ಸ್ಯಾನಿಟೈಸ್ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ. ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಇತರ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.