ಕಲಬುರಗಿ: ಕೊರೊನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿಯಲ್ಲಿ ವಿಧಿಸಲಾದ 144 ಸೆಕ್ಷನ್ ಮತ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶಿಸಿದ್ದಾರೆ.
![DC extended 144 section](https://etvbharatimages.akamaized.net/etvbharat/prod-images/kn-klb-04-144-section-vistarane-ka10021_24032020211643_2403f_1585064803_60.jpg)
ಜಿಲ್ಲೆಯಲ್ಲಿ ಕೊರೊನಾದಿಂದ ಓರ್ವ ವೃದ್ಧ ಸಾವನ್ನಪ್ಪಿದ್ದು, ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹಲವರನ್ನು ಐಸೋಲೇಷನ್ನಲ್ಲಿ ಇರಿಸಿ ನಿಗಾ ವಹಿಸಲಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿಯಲ್ಲಿ 6 ದಿನಗಳಿಂದ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಕೊರೊನಾ ಸೋಂಕು ತಡೆಗಟ್ಟುವ ಹಾಗೂ ಜನದಟ್ಟಣೆ ನಿಯಂತ್ರಿಸಲು ನಿಷೇಧಾಜ್ಞೆಯನ್ನು ಮತ್ತೆ 6 ದಿನಗಳ ಕಾಲ (ಮಾ. 31)ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.