ಸೇಡಂ: ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಗ್ರಾಮೀಣ ಭಾಗದ ಜನ ಸ್ವಯಂ ದಿಗ್ಬಂಧನಕ್ಕೆ ಮುಂದಾಗಿದ್ದಾರೆ. ತಾಲೂಕಿನ ಕಲಕಂಭ, ಅಳ್ಳೊಳ್ಳಿ ಹಾಗೂ ಬಿಬ್ಬಳ್ಳಿ ಗ್ರಾಮಸ್ಥರು ತಮ್ಮ ಗ್ರಾಮದ ಪ್ರವೇಶ ದ್ವಾರದ ಬಳಿ ಮುಳ್ಳು ಕಂಟಿಗಳ ಬೇಲಿ ನಿರ್ಮಿಸಿಕೊಂಡು ಹೊರಗಿನವರು ಗ್ರಾಮಕ್ಕೆ ಪ್ರವೇಶ ಮಾಡದಂತೆ ಎಚ್ಚರ ವಹಿಸುತ್ತಿದ್ದಾರೆ.
ಇನ್ನು ಹೊರ ದೇಶ, ಹೊರ ರಾಜ್ಯಗಳಿಂದ ಬರುವ ಜನರು ಮೊದಲು ವೈದ್ಯಕೀಯ ತಪಾಸಣೆಗೆ ಒಳಪಡಬೇಕು. ನಂತರವೇ ಗ್ರಾಮಕ್ಕೆ ಪ್ರವೇಶ ಮಾಡಬೇಕು. ಇಲ್ಲವಾದಲ್ಲಿ ಗ್ರಾಮದ ಒಳಗೆ ಬರುವಂತಿಲ್ಲ. ನಾವೂ ಕೂಡ ಯಾವುದೇ ಕಾರಣಕ್ಕೂ ಗ್ರಾಮದಿಂದ ಹೊರಗೆ ಹೋಗುವುದಿಲ್ಲವೆಂದು ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ.