ETV Bharat / state

ಕೊರೊನಾ ಕರಿ ನೆರಳಿನಿಂದ ಸಿನಿಮೋದ್ಯಮ ಸಂಕಷ್ಟಕ್ಕೆ ಸಿಲುಕಿದೆ: ನಾಗತಿಹಳ್ಳಿ ಚಂದ್ರಶೇಖರ್ ಕಳವಳ - ನಾಗತಿಹಳ್ಳಿ ಚಂದ್ರಶೇಖರ್​ ಹೇಳಿಕೆ

ಕೊರೊನಾ ಹರಡುವ ಭೀತಿಯಿಂದಾಗಿ ಚಿತ್ರಮಂದಿರದ ಕಡೆ ಬರಲು ಜನರು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ಚಿತ್ರೋದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಕೊರೊನಾಗೆ ಲಸಿಕೆ ಬರುವವರೆಗೂ ಈ ದುಸ್ಥಿತಿ ಹೀಗೆ ಮುಂದುವರೆಯಲಿದೆ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​​ ಹೇಳಿದರು.

Nagathihalli Chandrashekar
ನಾಗತಿಹಳ್ಳಿ ಚಂದ್ರಶೇಖರ್ ಹೇಳಿಕೆ
author img

By

Published : Nov 14, 2020, 3:29 PM IST

ಕಲಬುರಗಿ: ಕೊರೊನಾ ತಂದೊಡ್ಡಿದ ಸಂಕಷ್ಟ ಸಿನಿಮಾ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಳವಳ ವ್ಯಕ್ತಪಡಿಸಿದರು.

ನಾಗತಿಹಳ್ಳಿ ಚಂದ್ರಶೇಖರ್, ನಿರ್ದೇಶಕ

ಕಲಬುರಗಿಯಲ್ಲಿ ಮಾತನಾಡಿದ ಅವರು, ಕೊರೊನಾದಿಂದಾಗಿ ಚಿತ್ರಮಂದಿರಗಳನ್ನು ಮುಚ್ಚಲಾಯಿತು, ಚಿತ್ರೀಕರಣವನ್ನೂ ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಸಿನಿಮಾ ಉದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ. ಅದೆಲ್ಲಕ್ಕಿಂತಲೂ ಮುಖ್ಯವಾಗಿ ಕೆಳ ಹಂತದಲ್ಲಿ ಕೆಲಸ ಮಾಡುವ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದ್ದರೂ ಸಹ ಚಿತ್ರಮಂದಿರದ ಕಡೆ ಪ್ರೇಕ್ಷಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ಶೇ. 50ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ಮಾಡಿಕೊಟ್ಟಿದೆ. ಆದರೆ ಶೇ. 4ರಿಂದ 5ರಷ್ಟು ಪ್ರಮಾಣದಲ್ಲಿ ಮಾತ್ರ ಪ್ರೇಕ್ಷಕರು ಬರುತ್ತಿರುವುದು ಚಿತ್ರಮಂದಿರಗಳಿಗೂ ತುಂಬಲಾರದ ನಷ್ಟವಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.