ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ರೌದ್ರ ನರ್ತನ ಮುಂದುವರೆದಿದ್ದು, ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. 36 ವರ್ಷದ ಪುರುಷ ಕೊರೊನಾದಿಂದ ಸಾವನ್ನಪ್ಪಿದ್ದು, ಈತ ಬೆಂಗಳೂರಿನಿಂದ ವಾಪಸಾಗಿದ್ದ ಎನ್ನಲಾಗಿದೆ.
ಜೂನ್ 29 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಜೂನ್ 30 ರಂದು ನಿಧನ ಹೊಂದಿದ್ದಾನೆ. ಕೊರೊನಾ ಸೋಂಕಿರುವುದು ಇಂದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 38 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 7 ಮಕ್ಕಳು, 7 ಮಹಿಳೆಯರು ಮತ್ತು 24 ಪುರುಷರಿಗೆ ಸೋಂಕು ತಗುಲಿದೆ. ಇದರೊಂದಿಗೆ ಸೊಂಕಿತರ ಸಂಖ್ಯೆ 1,488 ಗೆ ಏರಿಕೆಯಾಗಿದೆ. ಮೃತರ ಸಂಖ್ಯೆ 19ಕ್ಕೆ ತಲುಪಿದೆ.
ಇಂದು 23 ಜನ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 1126 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 343 ಸಕ್ರಿಯ ಪ್ರಕರಣಗಳಿವೆ.