ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಒಂದು ವರ್ಷದ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿದೆ.
![Corona infection detected in one year old child](https://etvbharatimages.akamaized.net/etvbharat/prod-images/6799981_thuklb.jpg)
ಇದರೊಂದಿಗೆ ಸೋಂಕಿತರ ಸಂಖ್ಯೆ17ಕ್ಕೆ ಏರಿಕೆಯಾಗಿದೆ. ಕಲಬುರಗಿ ತಾಲೂಕಿನಲ್ಲಿ ಒಂದು ವರ್ಷದ ಗಂಡು ಮಗುವಿಗೆ ಕೊರೊನಾ ತಗುಲಿದೆ. ಮಗು ಹಾಗೂ ಪೋಷಕರ ಟ್ರಾವೆಲ್ ಹಿಸ್ಟರಿ ಇನ್ನೂ ಲಭ್ಯವಾಗಿಲ್ಲ. ಸದ್ಯ ಸೋಂಕಿತ ಮಗುವಿಗೆ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.