ಕಲಬುರಗಿ: ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ತನ್ನ ರಣಕೇಕೆ ಮುಂದುವರೆಸಿದ್ದು, ಮತ್ತೆ 69 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ 23 ಮಕ್ಕಳು, 18 ಮಹಿಳೆಯರು, 28 ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿಗೆ ತುತ್ತಾದ ಎಲ್ಲರೂ ಮಹಾರಾಷ್ಟ್ರದಿಂದ ಮರಳಿದ ವಲಸಿಗರಾಗಿದ್ದಾರೆ.
ಸೋಂಕಿತರೆಲ್ಲರನ್ನೂ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ. ಇಂದು 38 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರಗೆ ಒಟ್ಟು 166 ಜನ ಕೊರೊನಾದಿಂದ ಗುಣಮುಖರಾಗಿದ್ದು, 7 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 448 ಸಕ್ರಿಯ ಪ್ರಕರಣಗಳಿವೆ.