ಕಲಬುರಗಿ : ಜಿಲ್ಲೆಯ ಜನತೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿಯೊಂದು ಹೊರಬಿದ್ದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮೂವರು ರೋಗಿಗಳು ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಕಲಬುರಗಿ ಇಎಸ್ಐ ಆಸ್ಪತ್ರೆಯಲ್ಲಿ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಸೋಂಕಿತರಿಗೆ ನಿಗದಿತ ಸಮಯದವರೆಗೆ ಚಿಕಿತ್ಸೆ ನೀಡಿದ ಬಳಿಕ ಅವರಲ್ಲಿ ಕೊರೊನಾ ನೆಗೆಟಿವ್ ಕಂಡುಬಂದಿದೆ. ಮತ್ತೆ 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಮತ್ತೊಮ್ಮೆ ಪರೀಕ್ಷಿಸಿದಾಗಲೂ ಅವರಲ್ಲಿ ಮತ್ತೆ ನೆಗೆಟಿವ್ ಕಂಡುಬಂದಿದೆ. ಸೋಂಕಿನಿಂದ ಗುಣಮುಖರಾದ ಮೂವರನ್ನು ಇಎಸ್ಐ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಈ ಹಿಂದೆ ಜಿಲ್ಲೆಯಲ್ಲಿ ಮೂವರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಮೂವರು ಸೋಂಕು ಮುಕ್ತರಾಗಿದ್ದಾರೆ.ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 36 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇವರಲ್ಲಿ 04 ಜನ ಮೃತಪಟ್ಟಿದ್ದಾರೆ. 06 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನುಳಿದ 26 ಸೋಂಕಿತರಿಗೆ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.