ಕಲಬುರಗಿ: ಜಿಲ್ಲೆಯಲ್ಲಿಂದು 219 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5,529ಕ್ಕೆ ಏರಿಕೆಯಾಗಿದೆ.
ಇಂದು ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ ಐವರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಇನ್ನು,130 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 2,832 ಮಂದಿ ಬಿಡುಗಡೆಯಾಗಿದ್ದಾರೆ. ಸದ್ಯ, 2,597 ಸಕ್ರಿಯ ಪ್ರಕರಣಗಳಿವೆ.