ಕಲಬುರಗಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿಗೆ ಕೊರೊನಾ ಸೋಂಕು ತಗುಲಿದ್ದು, ಆತನೊಂದಿಗೆ ಸಂಪರ್ಕ ಹೊಂದಿದ್ದ ಅಧಿಕಾರಿಗಳು, ಸಿಬ್ಬಂದಿಗೂ ಈಗ ಭೀತಿ ಶುರುವಾಗಿದೆ.
ಆಳಂದ ತಾಲೂಕಿನ ಧುತ್ತರಗಾಂವ ಗ್ರಾಮದ 20 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕಂಟೇನ್ಮೆಂಟ್ ಝೋನ್ ನಲ್ಲಿದ್ದ ಈತ ಸಂಬಂಧದಲ್ಲಿ ಸೊಸೆಯಾಗಬೇಕಾದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.
ಆರೋಪಿಯನ್ನು ಬಂಧಿಸಿದ ಬಳಿಕ ನ್ಯಾಯಾಲಯದ ಗೇಟ್ ಹೊರಗೆ ತಂದು ನಿಲ್ಲಿಸಿ, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ಆತನಿಗೆ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ಆರೋಪಿಯನ್ನು ಐಸೋಲೇಷನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಇದೀಗ ಈತನೊಂದಿಗೆ ಸಂಪರ್ಕ ಹೊಂದಿದ್ದ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೋಂಕು ತಗುಲಿರುವ ಆತಂಕ ಎದುರಾಗಿದೆ. ಹೀಗಾಗಿ, ಮಹಿಳಾ ಠಾಣೆಯ ಎಎಸ್ಐ ಸೇರಿ 14 ಜನ ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಇನ್ನು ಅತ್ಯಾಚಾರಕ್ಕೊಳಗಾದ ಬಾಲಕಿ, ಆಕೆಯ ಪೋಷಕರು, ನೊಂದ ಬಾಲಕಿಯ ರಕ್ಷಣೆಗೆ ಆಗಮಿಸಿದ್ದ ಮಕ್ಕಳ ರಕ್ಷಣಾ ಅಧಿಕಾರಿ ಮತ್ತು ಸಿಬ್ಬಂದಿಗೂ ಸೋಂಕಿನ ಭೀತಿ ಎದುರಾಗಿದೆ.