ಕಲಬುರಗಿ: ನಗರದಲ್ಲಿ ಮತ್ತೊಂದು ಕೊರೊನಾ ವೈರಸ್ ದೃಢಪಟ್ಟಿದ್ದು ಮತ್ತೆ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
ಕೊರೊನಾಗೆ ವೃದ್ಧ ಬಲಿಯಾದ ಹಿನ್ನೆಲೆ ಆತನ ಕುಟುಂಬದ ನಾಲ್ವರು ಸದಸ್ಯರ ಥ್ರೋಟ್ ಸ್ಯಾಂಪಲ್ನ್ನು ಲ್ಯಾಬ್ ಟೆಸ್ಟ್‌ಗಾಗಿ ಕಳುಹಿಸಿ ಕೊಡಲಾಗಿತ್ತು. ನಿನ್ನೆಯಷ್ಟೇ ಮೂವರ ವರದಿ ನೆಗೆಟಿವ್ ಬಂದಿತ್ತು. ವರದಿಯಿಂದ ಸ್ವಲ್ಪ ನಿರಾಳವಾಗುವ ಮುನ್ನವೇ ಇದೀಗ ಉಳಿದಿದ್ದ ಓರ್ವರಿಗೆ ಪಾಸಿಟಿವ್ ಬಂದಿರುವುದು ಮತ್ತೆ ಜನ ಆತಂಕಕ್ಕೆ ಒಳಗಾಗಿದ್ದಾರೆ.
ಹೆಚ್ಚಿನ ಓದಿಗಾಗಿ: ದೇಶದಲ್ಲಿ ಕೊರೊನಾ ವೈರಸ್ಗೆ ಮೊದಲ ಬಲಿ... ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ ಲ್ಯಾಬ್ ವರದಿ!
ಕಲಬುರಗಿ ವೃದ್ಧನ ಸಾವಿಗೆ ಕೊರೊನಾ ಕಾರಣ... ಮಾರಕ ಸೋಂಕಿಗೆ ದೇಶದ ಮೊದಲ ವ್ಯಕ್ತಿ ಬಲಿ
-
ಕಲಬುರಗಿಯ 4 #COVID19 ಶಂಕಿತರಲ್ಲಿ, 3 ವ್ಯಕ್ತಿಗಳ ವರದಿ ಈ ಮೊದಲೇ ಬಂದಿದ್ದು, ಇದೀಗ ನಾಲ್ಕನೇ ವ್ಯಕ್ತಿಯ #COVID19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಇವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ನಿಗಾವಹಿಸಿರುವುದರಿಂದ, ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ
— B Sriramulu (@sriramulubjp) March 15, 2020 " class="align-text-top noRightClick twitterSection" data="
">ಕಲಬುರಗಿಯ 4 #COVID19 ಶಂಕಿತರಲ್ಲಿ, 3 ವ್ಯಕ್ತಿಗಳ ವರದಿ ಈ ಮೊದಲೇ ಬಂದಿದ್ದು, ಇದೀಗ ನಾಲ್ಕನೇ ವ್ಯಕ್ತಿಯ #COVID19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಇವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ನಿಗಾವಹಿಸಿರುವುದರಿಂದ, ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ
— B Sriramulu (@sriramulubjp) March 15, 2020ಕಲಬುರಗಿಯ 4 #COVID19 ಶಂಕಿತರಲ್ಲಿ, 3 ವ್ಯಕ್ತಿಗಳ ವರದಿ ಈ ಮೊದಲೇ ಬಂದಿದ್ದು, ಇದೀಗ ನಾಲ್ಕನೇ ವ್ಯಕ್ತಿಯ #COVID19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಇವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ನಿಗಾವಹಿಸಿರುವುದರಿಂದ, ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ
— B Sriramulu (@sriramulubjp) March 15, 2020
ಮೃತ ವೃದ್ಧನ ಜೊತೆ ನೇರ ಸಂಪರ್ಕ ಹೊಂದಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟಪಡಿಸಿದ್ದಾರೆ. ರೋಗಿಗೆ ಇ.ಎಸ್.ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.