ETV Bharat / state

ಕಲಬುರಗಿಯಲ್ಲಿ ಜಾತ್ರೆಗೆ ಆಗಮಿಸಿದ್ದ ದಂಪತಿ ವಿದ್ಯುತ್‌ ತಂತಿ ತಗುಲಿ ಸಾವು - etv bharat kannada

ವಿದ್ಯುತ್ ತಂತಿ ತಗುಲಿ ದಂಪತಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.

couple-dies-due-to-electrocution-in-kalaburagi
ಕಲಬುರಗಿ: ಜಾತ್ರೆಗೆ ಆಗಮಿಸಿದ್ದ ವೇಳೆ ವಿದ್ಯುತ್ ತಗುಲಿ ದಂಪತಿ ಸಾವು
author img

By

Published : Jun 13, 2023, 10:11 PM IST

ಕಲಬುರಗಿ: ಜಾತ್ರೆಗೆ ಆಗಮಿಸಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆಯ ಏವೂರ ತಾಂಡಾದ ನಿವಾಸಿಗಳಾದ ಶಿವು ರಾಠೋಡ (30) ಮತ್ತು ತಾರಾಬಾಯಿ ರಾಠೋಡ (26) ಮೃತರು. ಚಿತ್ತಾಪುರ ಪಟ್ಟಣದಲ್ಲಿ ನಡೆದ ಹಜರತ್ ಚಿತಾಶಹಾವಲಿ ದರ್ಗಾ ಜಾತ್ರಾ ಕಾರ್ಯಕ್ರಮಕ್ಕೆ ಇವರು ಆಗಮಿಸಿದ್ದರು.

ಘಟನೆ ಹೀಗೆ ನಡೆಯಿತು..: ವಿದ್ಯುತ್ ಕಂಬದ ಆಸರೆಗೆಂದು ನೆಲದಲ್ಲಿ ಹೂತಿದ್ದ ತಂತಿಗೆ ವಿದ್ಯುತ್ ಪ್ರವಹಿಸಿದೆ. ಅಲ್ಲೇ ನೀರು ನಿಂತಿದ್ದರಿಂದ ಅವಘಡ ಸಂಭವಿಸಿದೆ. ಮೊದಲು ಪತ್ನಿ ತಾರಾಬಾಯಿಗೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದಿದ್ದಾರೆ. ಪತ್ನಿಯನ್ನು ರಕ್ಷಿಸಲು ಹೋದ ಪತಿ ಶಿವು ರಾಠೋಡ್ ಕೂಡ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಇವರ ರಕ್ಷಣೆಗೆ ಹೋಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ಇಶಾ ಪಂತ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡು ಹಂದಿ ದಾಳಿ, ವ್ಯಕ್ತಿಗೆ ಗಾಯ: ಕಬ್ಬಿಗೆ ನೀರು ಬಿಡಲು ಹೊಲಕ್ಕೆ ಹೋದ ವೇಳೆ ಕಾಡು ಹಂದಿ ದಾಳಿ ಮಾಡಿದ್ದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗರೂರ್ (ಬಿ) ಗ್ರಾಮದಲ್ಲಿ ನಡೆದಿದೆ. ದತ್ತು ಜಮಾದಾರ ಎಂಬವರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ - ಪ್ರಕರಣ: ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಕಾನೂನುಬಾಹಿರ ಕೃತ್ಯಗಳನ್ನು ಎಸಗಿರುವ ವ್ಯಕ್ತಿಗಳ ವಿರುದ್ಧ ಒಟ್ಟು 109 ಪ್ರಕರಣಗಳನ್ನು ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರು ಇನ್ನೂ ಮುಂದೆ ಈ ತರಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Farmer dies after stepping on electric wire
ವಿದ್ಯುತ್ ತಂತಿ ತುಳಿದು ರೈತ ಸಾವು

ವಿದ್ಯುತ್ ತಂತಿ ತುಳಿದು ರೈತ, ಜಾನುವಾರು ಸಾವು: ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಮತ್ತು ಜಾನುವಾರುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಜರುಗಿದೆ. ಮಾಲಗಾರನಹಳ್ಳಿ ಗ್ರಾಮದ ಮುತ್ತುರಾಜ್ (45) ಮೃತರು. ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅದೇ ಗ್ರಾಮದ ಪ್ರಸನ್ನ ಎಂಬುವವರು ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಮುತ್ತುರಾಜ್‌ನನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ‌.

ಆದರೆ, ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಿದ್ಯುತ್ ತಂತಿ ತುಳಿದು ಮುತ್ತುರಾಜ್ ಮತ್ತು ಜಾನುವಾರುಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸೆಸ್ಕಾಂ ವತಿಯಿಂದ 50 ಲಕ್ಷ ರೂ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ. ಇನ್ನು ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.