ಕಲಬುರಗಿ: ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ದಂಪತಿಯ ಮೃತದೇಹಗಳು ರಕ್ತಸಿಕ್ತವಾಗಿ ಬಿದ್ದಿದ್ದು, ಬರ್ಬರವಾಗಿ ಹತ್ಯೆಗೈಯಲಾಗಿದೆ ಎನ್ನಲಾಗಿದೆ.
ಮಾರುತಿ(45), ಶಾರದಾಬಾಯಿ(35) ಮೃತ ದಂಪತಿ. ನಿನ್ನೆ ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಡಬಲ್ ಮರ್ಡರ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಕಮಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.