ETV Bharat / state

ಕಲಬುರಗಿ: 'ಕೋವಿಡ್ -19 ಸುರಕ್ಷಾ ಚಕ್ರ' ಸಹಾಯವಾಣಿ ಕೇಂದ್ರ ಪ್ರಾರಂಭ - Welfare Karnataka Regional Development Board

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೊರೊನಾ ನಿಯಂತ್ರಣಕ್ಕಾಗಿ ಕೋವಿಡ್ -19 ಸುರಕ್ಷಾ ಚಕ್ರ ಎಂಬ ಸಹಾಯವಾಣಿ ಕೇಂದ್ರವನ್ನು ತೆರೆಯಲಾಯಿತು.

Suraksha chakra
Suraksha chakra
author img

By

Published : Aug 12, 2020, 4:01 PM IST

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕೋವಿಡ್ -19 ಸುರಕ್ಷಾ ಚಕ್ರ ಎಂಬ ಸಹಾಯವಾಣಿ ಕೇಂದ್ರ ತೆರೆದಿದೆ.

ನಗರದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಇಂದು ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ಸಿ. ರೇವೂರ್ ಅವರು ಸುರಕ್ಷಾ ಚಕ್ರ ಸಹಾಯವಾಣಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತ ರೋಗಿಗಳಿಗೆ ಆ್ಯಂಬ್ಯುಲೆನ್ಸ್, ಆಸ್ಪತ್ರೆಗೆ ದಾಖಲಿಸುವುದು, ಆಸ್ಪತ್ರೆಗಳಲ್ಲಿನ ಬೆಡ್‍ಗಳ ಬಗ್ಗೆ ಮಾಹಿತಿ, ಪ್ರಯೋಗಾಲಯದಲ್ಲಿ ಪರೀಕ್ಷೆ ಸೇರಿದಂತೆ ಕೋವಿಡ್ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಕಲಬುರಗಿ ಜಿಲ್ಲೆಯ ಜನರು ಸಹಾಯವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಸಹಾಯವಾಣಿ ಸಂಖ್ಯೆ (+91) 88844-54424, 88844-54425, 88844-54426, 88844-54427 ಗೆ ಕರೆ ಮಾಡಿ ಅರ್ಧ ಗಂಟೆಯಲ್ಲಿ ಪರಿಹಾರ ಕಂಡುಕೊಳ್ಳಬಹುದೆಂದು ಅವರು ಹೇಳಿದರು. ಯಾವುದೇ ದೂರು ಬಂದಲ್ಲಿ ನಾನು ಸೇರಿದಂತೆ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಶೀಘ್ರ ಸಮಸ್ಯೆ ಇತ್ಯರ್ಥಗೊಳಿಸಲಿದ್ದೇವೆ ಎಂದು ಅವರು ಹೇಳಿದರು.

ಅತ್ಯಾಧುನಿಕ ಜೀವ ಸಂರಕ್ಷಕ ಆ್ಯಂಬುಲೆನ್ಸ್ ನೀಡುವಂತೆ ಮಂಡಳಿ ವ್ಯಾಪ್ತಿಯ ಆರು ಜಿಲ್ಲೆಗಳ ಆಸ್ಪತ್ರೆಗಳಿಂದ ಬೇಡಿಕೆ ಬಂದಿದ್ದು, 15-20 ದಿನಗಳಲ್ಲಿ ಇವುಗಳ ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಈ ವೇಳೆ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಉಪಸ್ಥಿತರಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.