ಕಲಬುರಗಿ: ಕೊರೊನಾ ಕಟ್ಟಿಹಾಕಲು ನಿನ್ನೆಯಿಂದ ಕಠಿಣ ಕರ್ಫ್ಯೂ ಜಾರಿಯಲ್ಲಿದೆ. ಈ ವೇಳೆ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ 399 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಕಲಬುರಗಿ ನಗರವೊಂದರಲ್ಲಿಯೇ 328 ದ್ವಿಚಕ್ರ ವಾಹನ, 13 ಆಟೋಗಳು, 58 ನಾಲ್ಕು ಚಕ್ರಗಳ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಈ ವಾಹನಗಳನ್ನು 14 ದಿನಗಳ ಲಾಕ್‌ಡೌನ್ ಅವಧಿ ಮುಗಿದ ಬಳಿಕ ಮಾಲೀಕರಿಗೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.