ಕಲಬುರಗಿ: ಅಕ್ರಮವಾಗಿ ಗೋಮಾಂಸ ದಂಧೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಹೊರವಲಯದಲ್ಲಿರುವ ಕೋಲ್ಡ್ ಸ್ಟೋರೇಜ್ ಮೇಲೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಗೋಮಾಂಸ ದಂಧೆ ಬಯಲಿಗೆಳೆದಿದ್ದಾರೆ.
ನಗರದ ಹೊರವಲಯದ ನದಿ ಸಿನ್ನೂರ್ ಬಳಿಯಿರುವ ಕೆಬಿಎನ್ ಕೋಲ್ಡ್ ಸ್ಟೋರೇಜ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮತ್ತು ಪೊಲೀಸರು, ಅಕ್ರಮವಾಗಿ ಶೇಖರಣೆ ಮಾಡಿಟ್ಟಿದ್ದ 2 ಟನ್ ಗೋಮಾಂಸ ಮತ್ತು ಇತರ ಮಾಂಸವನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಜೀಪ್-ಟ್ರಕ್ ಮಧ್ಯೆ ಅಪಘಾತ.. ಐವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ
ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಪೊಲೀಸರು ನಡೆಸುತ್ತಿದ್ದಾರೆ.