ETV Bharat / state

ಪ್ರತ್ಯೇಕ ಪ್ರಕರಣ: ಚರಂಡಿಗೆ ಬಿದ್ದು 2 ವರ್ಷದ ಮಗು ಸಾವು, ಬಾಲಕಿ ಮೇಲೆ ಅತ್ಯಾಚಾರ ಆರೋಪ - ವಿದ್ಯಾರ್ಥಿನಿ ಆತ್ಮಹತ್ಯೆ

kalburgi crime: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಹಾಗರಗಾ ಪ್ರದೇಶದಲ್ಲಿ ನಡೆದಿದೆ. ಮತ್ತೊಂದೆಡೆ ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಆಳಂದ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

kalburgi
ಚರಂಡಿಗೆ ಬಿದ್ದು 2 ವರ್ಷದ ಮಗು ಸಾವು
author img

By ETV Bharat Karnataka Team

Published : Aug 26, 2023, 8:51 AM IST

ಕಲಬುರಗಿ: ಆಟವಾಡುತ್ತಾ ಮನೆಯ ಮುಂದಿನ ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ನಗರದ ಹಾಗರಗಾ ಪ್ರದೇಶದ ಮುಜಾಹಿರ್ ಬಡಾವಣೆಯಲ್ಲಿ ನಡೆದಿದೆ. ಅಬ್ದುಲ್ ರಹಿಮಾನ್ (2) ಮೃತ ಕಂದಮ್ಮ. ಮಗು ಆಟ ಆಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೆತ್ತ ಕರುಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಧಿಕಾರಿಗಳ ವಿರುದ್ಧ ಆಕ್ರೋಶ: ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ. ಬಡಾವಣೆಯಲ್ಲಿ ಸಮರ್ಪಕ ರಸ್ತೆ, ಚರಂಡಿ‌ ಇಲ್ಲದೇ ಎಲ್ಲೆಂದರಲ್ಲಿ ನೀರು ನಿಲ್ಲುತ್ತದೆ. ಹೀಗಾಗಿ ಪದೇ ಪದೆ ಇಂತಹ ಅವಘಡಗಳು‌ ಸಂಭವಿಸುತ್ತಿವೆ. ಈಗ ಮಗು ಚರಂಡಿ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ. ಇದಕ್ಕೆ ಯಾರು ಹೊಣೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

6 ವರ್ಷದ ಮಗು ಮೇಲೆ ಅತ್ಯಾಚಾರ ಆರೋಪ: ಆರು ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ವರದಿಯಾಗಿದೆ. ಸುದ್ದಿ ಕಾಳ್ಗಿಚ್ಚಿನಂತೆ ಹರಡಿ ಕೆರಳಿದ ಜನರು ಆಳಂದ ಪೊಲೀಸ್​​ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಶ್ರೀರಾಮ ಮಾರ್ಕೆಟ್, ಬಸ್ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿನ ಅಂಗಡಿ-ಮುಂಗಟ್ಟುಗಳನ್ನು ಜನರು ಸ್ವಯಂ ಪೇರಿತರಾಗಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು. ಇದರಿಂದ ಆಳಂದ ಪಟ್ಟಣದಲ್ಲಿ ಶುಕ್ರವಾರ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.

ಮಾಹಿತಿ ತಿಳಿದ ಎಸ್​ಪಿ ಇಶಾ ಪಂತ್ ಆಳಂದ ಪಟ್ಟಣಕ್ಕೆ ದೌಡಾಯಿಸಿ ಜನರ ಮನವೊಲಿಸಿ ವಾತಾವರಣ ತಿಳಿಗೊಳಿಸಿದರು. ಡಿವೈಎಸ್​ಪಿ, ಸಿಪಿಐಗಳು ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲಿ ಬಿಡಾರ ಹೂಡಿದ್ದಾರೆ. ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ ವೈಷಮ್ಯ-ವ್ಯಕ್ತಿ ಮೇಲೆ ಹಲ್ಲೆ ಆರೋಪ: ರಾಜಕೀಯ ವೈಷಮ್ಯದ ಹಿನ್ನೆಲೆ ಗುಂಪು ಕಟ್ಟಕೊಂಡು ಬಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಜಾಪೂರ ಗ್ರಾಮದಲ್ಲಿ ನಡೆದಿದೆ.‌ ಗ್ರಾಮದ ಪರಮೇಶ್ವರ ಪೂಜಾರ ಎಂಬುವವರ ಮೇಲೆ ಹಲ್ಲೆಯಾಗಿದ್ದು, ತಲೆಗೆ ಗಾಯವಾಗಿದೆ.

ಕಳೆದ 2021ರಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತನ್ನ ತಮ್ಮನ ಪತ್ನಿ ಗೆದ್ದಿದ್ದು, ಅಂದಿನಿಂದ ನಾಗಣಗೌಡ ಎಂಬುವವರು ಹಗೆತನ ಸಾಧಿಸುತ್ತಿದ್ದಾರೆ. ಗುಂಪು ಕಟ್ಟಿಕೊಂಡು ಬಂದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಪರಮೇಶ್ವರ ನಾಗಣಗೌಡ ಸೇರಿ 9 ಮಂದಿ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎಸಿ ಔಟ್‌ಡೋರ್ ಕಳವು - ಮೂವರ ಬಂಧನ: ಎಸಿ ಹೊರಭಾಗದ ಔಟ್‌ಡೋರ್ ಫ್ಯಾನ್ ಕಳವು ಮಾಡುವ ಪ್ರವೃತ್ತಿ ಬೆಳಸಿಕೊಂಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಪುನಗರ ನಿವಾಸಿ ರಾಹುಲ್ ಸಕಟ (28), ಕಾರ್ತಿಕ್ ಉಪಾಧ್ಯ (20) ಹಾಗೂ ಇನ್ನೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಇತ್ತೀಚೆಗೆ ಕಳ್ಳತನ‌ ಮಾಡಿದ್ದ ಡಾ.ಬಿ.ಆರ್ ‌ಅಂಬೇಡ್ಕರ್ ಪದವಿ ಕಾಲೇಜಿನ ಗೊದ್ರೇಜ್ ಕಂಪನಿಯ 6 ಎಸಿ ಔಟ್‌ಡೋರ್ ಭಾಗವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಪುರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾಲೇಜಿನಿಂದ ತಡವಾಗಿ ಬಂದಿದ್ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಪಿಯುಸಿ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಕಾವೇರಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಗುರುವಾರ ಕಾಲೇಜಿನಿಂದ ಬರಲು ತಡಮಾಡಿದ್ದರಿಂದ ಪೋಷಕರು ಪ್ರಶ್ನೆ ಮಾಡಿ ಬೈಯ್ದು ಬುದ್ದಿಮಾತು ಹೇಳಿದ್ದರಂತೆ. ಇದರಿಂದ ಮನನೊಂದು ಮನೆಯಿಂದ ಹೊರಗೆ ಹೋಗಿದ್ದ ಕಾವೇರಿ ಕೆರೆಗೆ ಜಿಗಿದು ಪ್ರಾಣ ಕಳೆದು ಕೊಂಡಿದ್ದಾಳೆ.

ಮಗಳಿಗಾಗಿ ಎಲ್ಲಡೆ ಹುಡಿಕಾಡಿದರೂ ಪತ್ತೆ ಆಗಿರಲಿಲ್ಲ. ಮರು ದಿನ (ಶುಕ್ರವಾರ) ಆಕೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕ ಆಕ್ರಂದನ ಮುಗಿಲು ಮುಟ್ಟಿದೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜೇವರ್ಗಿ ಶಾಸಕರ ಮನೆಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.