ETV Bharat / state

30 ಲಕ್ಷಕ್ಕೂ ಅಧಿಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ : ಸಿಎಂ​ ಯಡಿಯೂರಪ್ಪ - ಗ್ರಾಮೀಣ ಆರ್ಥಿಕತೆ

ಒಟ್ಟು 1,437 ಗ್ರಾಮಗಳಲ್ಲಿ ಬರುವ 10,000 ರೈತರಿಗೆ ಕೃಷಿ ಪೂರಕ ಚಟುವಟಿಕೆಗಳು ಹಾಗೂ ಮುಂಗಾರು ಹಂಗಾಮಿಗಾಗಿ ಕಡಿಮೆ ಬಡ್ಡಿ ದರದಲ್ಲಿ 50 ಕೋಟಿ ರೂ.ಗಳ ಕೃಷಿ ಅಲ್ಪಾವಧಿ ಬೆಳೆ ಸಾಲವನ್ನು ವಿತರಿಸುವ ಮೂಲಕ ರೈತರ ಕಾಯಕಕ್ಕೆ ಬೆಂಬಲ ನೀಡಲಾಗುತ್ತಿದೆ..

cm-yeddyurappa
ಸಿಎಂ​ ಯಡಿಯೂರಪ್ಪ
author img

By

Published : Jul 10, 2021, 9:34 PM IST

ಕಲಬುರಗಿ : ಪ್ರಸಕ್ತ ಸಾಲಿನಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಲಾಗಿದೆ. 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ರೂ. 19,370 ಕೋಟಿ ಅಲ್ಪಾವಧಿ ಬೆಳೆ ಸಾಲ ಮತ್ತು 60 ಲಕ್ಷ ರೈತರಿಗೆ ಶೇ.3ರ ಬಡ್ಡಿ ದರದಲ್ಲಿ 1,440 ಕೋಟಿ ಮಧ್ಯಮಾವಧಿ, ದೀರ್ಘಾವಧಿ ಸಾಲ ವಿತರಿಸಲು ಮುಂದಾಗಲಾಗಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಹಕಾರ ಇಲಾಖೆ ಮತ್ತು ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಿಂದ ಶನಿವಾರ ನಗರದ ಡಾ. ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ “ರೈತರಿಗೆ ಬಡ್ಡಿ ರಹಿತ ಸಾಲ” ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮಂಜೂರಾತಿ ಪತ್ರ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸಲು ಸಹಕಾರಿ ಬ್ಯಾಂಕ್​​​ಗಳು ಸಹಕಾರಿಯಾಗಿವೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಒಟ್ಟು 1,437 ಗ್ರಾಮಗಳಲ್ಲಿ ಬರುವ 10,000 ರೈತರಿಗೆ ಕೃಷಿ ಪೂರಕ ಚಟುವಟಿಕೆಗಳು ಹಾಗೂ ಮುಂಗಾರು ಹಂಗಾಮಿಗಾಗಿ ಕಡಿಮೆ ಬಡ್ಡಿ ದರದಲ್ಲಿ 50 ಕೋಟಿ ರೂ.ಗಳ ಕೃಷಿ ಅಲ್ಪಾವಧಿ ಬೆಳೆ ಸಾಲವನ್ನು ವಿತರಿಸುವ ಮೂಲಕ ರೈತರ ಕಾಯಕಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದಿದ್ದಾರೆ.

ಡಿಸಿಸಿ ಬ್ಯಾಂಕಿನಲ್ಲಿ ಸರ್ಕಾರದ ಸಹಭಾಗಿತ್ವವನ್ನು ಪ್ರೋತ್ಸಾಹಿಸಲು ಹಾಗೂ ಶೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳಪಟ್ಟು ಶೇ.25ರಷ್ಟು ಶೇರು ಬಂಡವಾಳ ನೀಡಲು 2021-22ರ ಆಯವ್ಯಯದಲ್ಲಿ ಘೋಷಿಸಲಾಗಿದೆ. ರಾಜ್ಯದಲ್ಲಿ 5,500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅವುಗಳನ್ನು 198 ಕೋಟಿ ರೂ.ಗಳ ವೆಚ್ಚದಲ್ಲಿ ಗಣಕೀಕರಣಗೊಳಿಸಲಾಗುವುದು ಎಂದಿದ್ದಾರೆ.

ಓದಿ: karnataka covid : ರಾಜ್ಯದಲ್ಲಿಂದು 2,162 ಪ್ರಕರಣ; 48 ಸೋಂಕಿತರು ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.